Home
ನರೇಗಲ್ಲ ಪಟ್ಟಣ ಪಂಚಾಯತಿಯು 1975 ರಲ್ಲಿ ಸ್ಥಾಪನೆಯಾಯಿತು. ನರೇಗಲ್ಲ ಪಟ್ಟಣ ಪಂಚಾಯತಿಯು ಜಿಲ್ಲೇ ಕೇಂದ್ರವಾದ ಗದಗ ದಿಂದಾ 28 ಕೀಲೋಮೀಟರ್ ದೂರದಲ್ಲಿರುತ್ತದೆ. 2001 ರ ಜನಗಣತಿಯ ಪ್ರಕಾರ ನರೇಗಲ್ಲ ಪಟ್ಟಣ ಪಂಚಾಯತಿಯ ವ್ಯಾಪ್ತಿಯಲ್ಲಿ 16,685 ಜನಸಂಖ್ಯೆಯನ್ನು ಹೊಂದಿರುತ್ತದೆ. ನರೇಗಲ್ಲ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ 17 ವಾರ್ಡ್ ಗಳಿದ್ದು 17 ಚುನಾಯಿತ ಸದಸ್ಯರು ಹಾಗೂ 3 ನಾಮನಿರ್ದೇಶಿತ ಸದಸ್ಯರಿರುತ್ತಾರೆ. ನರೇಗಲ್ಲ ಪಟ್ಟಣದ ವ್ಯಾಪ್ತಿಯು ಒಟ್ಟು 4.10 ಚದುರ ಕೀಲೋಮೀಟರ್ ಗಳಿರುತ್ತದೆ. ಇದು 5 ಮಜರೆ ಹಳ್ಳಿಗಳಾದ ಕೋಚಲಾಪೂರ, ಕೊಡಿಕೊಪ್ಪ,ತೋಟಗಂಟಿ, ಮಲ್ಲಾಪೂರ, ದ್ಯಾಂಪೂರ ಒಳಗೊಂಡಿರುತ್ತದೆ. ನರೇಗಲ್ಲ ಪಟ್ಟಣವು ಧಾರ್ಮಿಕ ಕ್ಷೇತ್ರವಾಗಿದೆ. ಇಲ್ಲಿ ಶ್ರೀ ಸುಪ್ರಸಿದ್ದ ಹುಚ್ಚಿರೇಶ್ವರ ದೇವಸ್ಥಾನ, ತ್ರೀಪುರಾಂತಕೇಶ್ವರ ದೇವಸ್ಥಾನ, ಹಾಗೂ ಕಾಶೀ ಶ್ಯಾವಲಿ ದರಗಾ ಪ್ರಸಿದ್ದ ಪಡೆದಿವೆ.
The Town Panchayat Council (TPC) Naregal was constituted in 1975. It is situated along distance of 28 Kms from Gadag. Naregal town is a historic place where 'Huccireshwar temple, Tripurantakeshwara temple and Shyavli Darga. It included 5 villages Kochalapur, Kodikoppa, Mallapur, Dyampur, Totaganti, It has a population of 16,685 as per census 2001. The TPC has 17 wards and equal number of councilors and 3 Numbers of Nominee Councilors. Naregal TPC stretches to an area of 4.20 Sq Kms.
-:ಕೆ.ಎಂ.ಆರ್.ಪಿ. ಗಣಕೀಕರಣ ಯೋಜನೆಯ ಕಿರು ಪರಿಚಯ :-
ಪೌರ ಸುಧಾರಣಾ ಕೋಶ ಹಾಗೂ ಜಿಲ್ಲಾಧಿಕಾರಿಗಳ ಕಛೇರಿಯ ಮೇಲುಸ್ತುವಾರಿಯಲ್ಲಿ ಹೊಸದುರ್ಗ ಪುರಸಭೆಯ ಹಲವಾರು ಗಣಕೀಕರಣ ಯೋಜನೆಗಳು ಈಗಾಗಲೇ ಮುಕ್ತಾಯಗೊಂಡಿರುತ್ತವೆ ಹಾಗೂ ಇನ್ನು ಕೆಲ ಗಣಕೀಕರಣ ಯೋಜನೆಗಳು ಪ್ರಗತಿಯ ಹಾದಿಯಲ್ಲಿದ್ದು ಶೀಘ್ರದಲ್ಲಿ ಮುಕ್ತಾಯಗೊಂಡು ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿವೆ. ಈಗಾಗಲೇ ಬಹುತೇಕ ಮಾಹಿತಿಯನ್ನು ಕಛೇರಿಯ ಅಂತರ್ಜಾಲ ತಾಣದಲ್ಲಿ ಅಳವಡಿಸಲಾಗಿರುತ್ತದೆ.
-
ಪಟ್ಟಣ ಪಂಚಾಯತಿಯ ಅಂತರ್ಜಾಲ ತಾಣ: ನರೇಗಲ್ಲ ಪಟ್ಟಣವು ತನ್ನದೇ ಆದ ಅಧಿಕೃತ ಅಂತರ್ಜಾಲ ತಾಣ ಹೊಂದಿದ್ದು ಪಟ್ಟಣದ ಸಮಗ್ರ ಮಾಹಿತಿಯೂ ಇದರಲ್ಲಿ ಲಭ್ಯವಿರುತ್ತದೆ. ಕಛೇರಿಯ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆಯನ್ನು ಎತ್ತಿ ಹಿಡಿಯುವ ಸದುದ್ದೇಶದಿಂದ ಪೌರ ಸುಧಾರಣಾ ಕೋಶ ಈ ಅಂತರ್ಜಾಲ ತಾಣ ಅಭಿವೃದ್ಧಿ ಪಡಿಸಿದ್ದು ಹೊಸದುರ್ಗ ಪುರಸಭೆಯಿಂದ ಈ ಅಂತರ್ಜಾಲ ತಾಣ ನಿರ್ವಹಿಸಲಾಗುತ್ತಿದೆ. ಪ್ರಮುಖವಾಗಿ ಸಿಬ್ಬಂದಿ ಮಾಹಿತಿ, ಕೌನ್ಸಿಲ್ ಮಾಹಿತಿ, ಚುನಾಯಿತ ಪ್ರತಿನಿಧಿಗಳ ಮಾಹಿತಿ, ಟೆಂಡರ್ ಮಾಹಿತಿ, ಸಾರ್ವಜನಿಕ ಪ್ರಕಟಣೆ ಕಾಯ್ದೆ, ಮಾಹಿತಿ ಹಕ್ಕು, ಘನತ್ಯಾಜ್ಯ ವಸ್ತು ವಿಲೇವಾರಿ, ಮಳೆ ನೀರು ಕೊಯ್ಲು ಪದ್ಧತಿ, ಪಟ್ಟಣದ ರಸ್ತೆ, ಬೀದಿ ದೀಪ, ಚರಂಡಿ ಇತ್ಯಾದಿಗಳಿಗೆ ಸಂಬಂಧಿಸಿದ ಅಂಕಿ ಅಂಶಗಳು, ಪಟ್ಟಣದ ಹಣಕಾಸು ಪದ್ಧತಿ ವಿವರ, ಆಯ ವ್ಯಯ, ಸಭಾನಡವಳಿಗಳು ಇನ್ನು ಕೆಲವು ಉಪಯುಕ್ತ ಮಾಹಿತಿಗಳು ಈ ಅಂತರ್ಜಾಲ ತಾಣದಲ್ಲಿ ಲಭ್ಯವಿರುತ್ತದೆ. ಪೌರ ಸುಧಾರಣಾ ಕೋಶದ ಮತ್ತು ಕೆ.ಎಂ.ಡಿ.ಎಸ್.ನ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿ ನಿರ್ವಹಿಸಲಾಗುತ್ತಿರುವ ಎಲ್ಲಾ ಆನ್‌ಲೈನ್ ಅಪ್ಲಿಕೇಷನ್‌ಗಳು ಈ ಅಂತರ್ಜಾಲ ತಾಣದಲ್ಲಿ ದೊರೆಯುವಂತಿದ್ದು ಪಟ್ಟಣದ ನಾಗರೀಕರು ಈ ತಾಣಕ್ಕೆ ಬೇಟಿ ನೀಡಿ ಅವಶ್ಯ ಮಾಹಿತಿ ಪಡೆಯಬಹುದಾಗಿರುತ್ತದೆ.
-
ಜನನ-ಮರಣ ದಾಖಲೆಗಳ ಆನ್ ಲೈನ್ ಅಪ್ಲಿಕೇಷನ್: 1990 ರಿಂದ ಇಲ್ಲಿಯವರೆಗಿನ ಪಟ್ಟಣದ ಎಲ್ಲಾ ಜನನ-ಮರಣ ದಾಖಲೆಗಳನ್ನು ಗಣಕೀಕರಣಗೊಳಿಸಲಾಗಿದ್ದು ಸಾರ್ವಜನಿಕರಿಗೆ ಗಣಕೀಕೃತ ಜನನ-ಮರಣ ದಾಖಲಾತಿಗಳನ್ನು ವಿತರಿಸಲಾಗುತ್ತಿದೆ. ಜನನ-ಮರಣಗಳ ಹಳೆಯ ದಾಖಲಾತಿಗಳ ಡಾಟಾ ಎಂಟ್ರಿ ಕಾರ್ಯವು ಪ್ರಗತಿಯಲ್ಲಿದ್ದು, ಶೀಘ್ರದಲ್ಲಿಯೇ 1990 ನೇ ಸಾಲಿನಿಂದ 1998 ನೇ ಸಾಲಿನವರೆಗಿನ ದಾಖಲಾತಿಗಳ ಗಣಕೀಕರಣ ಕಾರ್ಯ ಪೂರ್ಣಗೊಳ್ಳಲಿದ್ದು, ಇದರಿಂದ ಸಾರ್ವಜನಿಕರು ತ್ವರಿತವಾಗಿ ಜನನ-ಮರಣ ದಾಖಲಾತಿಗಳನ್ನು ಪಡೆಯುವಲ್ಲಿ ಸಹಕಾರಿಯಾಗಿದೆ.
-
ಪಿ.ಜಿ.ಆರ್. ಆನ್ ಲೈನ್ ಅಪ್ಲಿಕೇಷನ್: ಪಟ್ಟಣದ ನಾಗರೀಕರ ದೈನಂದಿನ ಅವಶ್ಯಕತೆಗಳಾದ ಬೀದಿ ದೀಪ, ಕುಡಿಯುವ ನೀರು, ಸ್ವಚ್ಚತೆ ಇತ್ಯಾದಿ ಕುಂದುಕೊರತೆಗಳನ್ನು ತ್ವರಿತವಾಗಿ ಪರಿಹರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಕುಂದುಕೊರತೆಗಳ ಪರಿಹಾರ ಕೇಂದ್ರ ಸ್ಥಾಪಿಸಲಾಗಿರುತ್ತದೆ. ಈ ಕುಂದುಕೊರತೆ ಪರಿಹಾರ ಕೇಂದ್ರವು ಪ್ರತಿ ದಿನ 8 ಗಂಟೆಗಳ ಕಾರ್ಯ ನಿರ್ವಹಿಸುತ್ತದೆ.ಸಾರ್ವಜನಿಕರು ಕುಂದುಕೊರತೆ ಪರಿಹಾರ ಕೇಂದ್ರದ ಸಹಾಯ ವಾಣಿ: 08381-23268228 ಕ್ಕೆ ಕರೆ ಮಾಡಿ ದೂರು ನೊಂದಾಯಿಸಿಕೊಳ್ಳಬಹುದಾಗಿದೆ ಅಲ್ಲದೆ ತಮ್ಮ ದೂರಿನ ಸ್ಥಿತಿಯ ಬಗ್ಗೆ ಹಂತ ಹಂತದಲ್ಲಿ ತಿಳಿದುಕೊಳ್ಳಬಹುದಾಗಿದೆ. ಅದೇ ರೀತಿ ಈ ಕಛೇರಿ ಅಂತರ್ಜಾಲ ತಾಣಕ್ಕೆ ಬೇಟಿ ನೀಡಿ ಪಿ.ಜಿ.ಆರ್. ಆನ್‌ಲೈನ್ ಅಪ್ಲಿಕೇಷನ್ ಮುಖಾಂತರವೂ ದೂರು ನೊಂದಾಯಿಸಬಹುದಾಗಿರುತ್ತದೆ.ಅಥವಾ ನೇರವಾಗಿ ಕುಂದು ಕೊರತೆ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ ದೂರು ನೊಂದಾಯಿಸಬಹುದಾಗಿರುತ್ತದೆ. ದೂರು ಸ್ವೀಕರಿಸಿದ ನಂತರ ಕುಂದು ಕೊರತೆ ಪರಿಹಾರ ಕೇಂದ್ರದ ನಿರ್ವಾಹಕರು ಒಂದು "Unique Complaint Tracking Number " ನೀಡುವರು. ಇದರ ಸಹಾಯದಿಂದ ನಾಗರೀಕರು ತಮ್ಮ ದೂರಿನ ಸ್ಥಿತಿಯನ್ನು ಹಂತ ಹಂತವಾಗಿ ತಿಳಿದುಕೊಳ್ಳಬಹುದಾಗಿದೆ. ದೂರು ಪರಿಹಾರ ಕಾರ್ಯದ ಪ್ರತಿ ಹಂತದ ಸ್ಥಿತಿಯನ್ನು ಇ-ಮೇಲ್ ಮೂಲಕವೂ ಸಹ ವಿಳಾಸ ನೊಂದಾಯಿಸಿ ಪಡೆಯಬಹುದಾಗಿರುತ್ತದೆ.
-
ಭೌಗೋಳಿಕ ಆಸ್ತಿ ತೆರಿಗೆ ಪದ್ಧತಿ ಅನುಷ್ಟಾನ ಕಾರ್ಯ: ಕರ್ನಾಟಕ ಪೌರ ಸುಧಾರಣಾ ಯೋಜನೆಯಡಿ ನರೇಗಲ್ಲ ಪಟ್ಟಣದಲ್ಲಿ ಭೌಗೋಳಿಕ ಆಸ್ತಿ ತೆರಿಗೆ ಪದ್ಧತಿ ಅನುಷ್ಟಾನ ಅತೀ ಪ್ರಮುಖ ಯೋಜನೆಯಾಗಿದೆ. ಈ ಹಂತದಲ್ಲಿ ಈಗಾಗಲೇ ಪಟ್ಟಣದ ಎಲ್ಲಾ ಆಸ್ತಿಗಳ ಸರ್ವೆಕಾರ್ಯ ಪೂರ್ಣಗೊಳಿಸಿ, ಆಸ್ತಿಗಳ ವಿವರ (ನಮೂನೆ "ಸಿ") ಡಾಟಾ ಎಂಟ್ರಿ ಮಾಡಿಸಿ ಪೌರ ಸುಧಾರಣಾ ಕೋಶಕ್ಕೆ ಸಲ್ಲಿಸಲಾಗಿದ್ದು ಶೀಘ್ರದಲ್ಲಿಯೇ ಪೌರ ಸುಧಾರಣಾ ಕೋಶದಿಂದ ಲೈವ್ ಮಾಡಲಾಗುವುದು.ಇದರಿಂದ ಪಟ್ಟಣದ ಆಸ್ತಿಗಳನ್ನು ಸುಲಭವಾಗಿ ಹುಡುಬಹುದಾಗಿದ್ದು, ಆಸ್ತಿ ತೆರಿಗೆ ವಿವರ ಗಳನ್ನು ಸಹ ಸಾರ್ವಜನಿಕರು ಆನ್‌ಲೈನ್ ಮುಖಾಂತರವೇ ಪಡೆಯಬಹುದಾಗಿರುತ್ತದೆ ಹಾಗೂ ಆನ್ ಲೈನ್ ಮೂಲಕ ಆಸ್ತಿತೆರಿಗೆ ಪಾವತಿಸಬಹುದಾಗಿದ್ದು ಪಟ್ಟಣದ ನಾಗರೀಕರು ಶೀಘ್ರದಲ್ಲಿಯೇ ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿರುತ್ತದೆ.
-
ಇತರೆ ಆನ್‌ಲೈನ್ ಅಪ್ಲಿಕೇಷನ್‌ಗಳು: ಸಿ.ಎಂ.ಎಸ್.ಎಂ.ಟಿ.ಡಿ.ಪಿ, ಆಶಾಕಿರಣ ಮಾಹಿತಿ, ಎಸ್.ಜೆ.ಎಸ್.ಆರ್.ವೈ, ಎಸ್.ಎಲ್.ಬಿ, ನಮ್ಮ ಮನೆ, ಎಫ್.ಬಿ.ಎ.ಎಸ್. ಜನನ-ಮರಣ ಇತ್ಯಾದಿ ಪ್ರಮುಖ ಆನ್ ಲೈನ್ ಅಪ್ಲಿಕೇಷನ್ ಗಳನ್ನು ಪೌರಸುಧಾರಣಾ ಕೋಶ ಮತ್ತು ಕೆ.ಎಂ.ಡಿ.ಎಸ್. ಸಹಯೋಗದೊಂದಿಗೆ ಅಭಿವೃದ್ಧಿ ಪಡಿಸಲಾಗಿದ್ದು ಕಛೇರಿಯ ಕೆಲಸಗಳ ಸುಲಭ ನಿರ್ವಹಣೆಗೆ ಹಾಗೂ ಸಾರ್ವಜನಿಕ ಹಿತಾಸಕ್ತಿಯ ಮೇರೆಗೆ ಈ ಆನ್‌ಲೈನ್ ಅಪ್ಲಿಕೇಷನ್‌ಗಳ ಸದ್ಬಳಕೆ ಮಾಡಿಕೊಳ್ಳಲಾಗುತ್ತಿದೆ.
ಘನತ್ಯಾಜ್ಯ ವಸ್ತು ನಿರ್ವಹಣೆ ಕುರಿತು :-
ನರೇಗಲ್ಲ ಪಟ್ಟಣದ ವ್ಯಾಪ್ತಿಯಲ್ಲಿ ಪ್ರತಿ ನಿತ್ಯ ಸುಮಾರು 4 ಟನ್ ಘನ ತ್ಯಾಜ್ಯ ವಸ್ತು ಉತ್ಪತ್ತಿಯಾಗುತ್ತಿದೆ. ಪಟ್ಟಣದ ನೆಲ ಭರ್ತಿ ಜಾಗವನ್ನು ಹೊಂದಿದ್ದು ಪಟ್ಟಣದಿಂದ ಸುಮಾರು 3 ಕಿ.ಮೀ. ಅಂತರದಲ್ಲಿರುತ್ತದೆ. ಪಟ್ಟಣದಲ್ಲಿ 24 ಜನ ಪೌರಕಾರ್ಮಿಕರು ಕರ್ತವ್ಯ ನಿರ್ವಹಿಸುತ್ತಿರುತ್ತಾರೆ. ಪಟ್ಟಣದ ವ್ಯಾಪ್ತಿಯಲ್ಲಿ ಪ್ರಸ್ತುತ ಪ್ರತಿನಿತ್ಯ ಸುಮಾರು 4 ಟನ್ ಘನತ್ಯಾಜ್ಯ ವಸ್ತುವನ್ನು ಸಂಗ್ರಹಿಸಿ ನೆಲಭರ್ತಿ ಜಾಗಕ್ಕೆ 2 ಟ್ರ್ಯಾಕ್ಟರ್ ಗಳ ಮುಖಾಂತರ ಸಾಗಿಸಲಾಗುತ್ತದೆ. ಪ್ರಸ್ತುತ ವಾರ್ಡ್ ನಂ.1 ರಿಂದ ವಾರ್ಡ್ ನಂ. 17 ರವರೆಗೆ ಮನೆ ಮನೆ ಕಸ ಸಂಗ್ರಹಣೆ ಕಾರ್ಯಕ್ರಮ ಈಗಾಗಲೇ ಯಶಸ್ವಿಯಾಗಿ ನಡೆಯುತ್ತಿರುತ್ತದೆ. ಪೌರ ಘನತ್ಯಾಜ್ಯ ವಸ್ತು ವ್ಯವಸ್ಥಾಪನೆ ಮತ್ತು ನಿರ್ವಹಣೆ 2000 ನಿಯಮಗಳ ಪ್ರಕಾರ ಹಂತ ಹಂತವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
The contents of this page are maintained by Chief officer, Naregal TPC Last updated on 31-1-2012

